ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ

ಆತ್ಮೀಯರಾದ ಪ್ರೇಮ್ ಕುಮಾರ್ ಜೈನ್, ಧರ್ಮಶ್ರೀ ಹೊಸ್ಮಾರು, ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಅಣ್ಣಾಜೇರ್ ಎಂದು ಜನಾನುರಾಗಿಯಾಗಿ, ಯಶಸ್ವಿ ಉದ್ಯಮಿಗಳಾಗಿ,ಕೃಷಿಕರಾಗಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿ ಹಾಗೂ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮ ಸಂಘಟಕ ಎಂಬ ಖ್ಯಾತಿ ಪಡೆದ ಶ್ರೀಯುತರು ಸಲ್ಲಿಸಿದ ಸೇವೆ ಎಂದೆಂದಿಗೂ ಅವಿಸ್ಮರಣೀಯ.
ಶ್ರೀಯುತರು ನಮ್ಮನ್ನು ಅಗಲಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.





















































































