
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ರಾಯಚೂರು, ಧಾರವಾಡ ,ಹಾವೇರಿ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ,ಮುಂದಿನ ಮೂರು ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.
ರಾಜ್ಯದಲ್ಲಿ ಭಾರಿ ಮಳೆಯ ಕಾರಣ ತಗ್ಗು ಪ್ರದೇಶದ ನಿವಾಸಿಗಳು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

































