
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ.

































