
ಕಾರ್ಕಳ: ತಾಲೂಕಿನ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಪಿಯು ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಡಾ. ಜೀವರಾಜ್ ಆಳ್ವ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭವನ್ನು ಜೂನ್ 16ರಂದು ಬೆಳಗ್ಗೆ 10:30ಕ್ಕೆ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಕಾರ್ಕಳ ಜೈನಮಠದ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದಾರೆ.
ಅತಿಥಿಗಳಾಗಿ ಅಖಿಲ ಕರ್ನಾಟಕ ಮಕ್ಕಳ ಕೂಟದ ಅಧ್ಯಕ್ಷ ಕೆ. ಮೋಹನ್ ದೇವು ಆಳ್ವ, ಕೊರಂಗ್ರಪಾಡಿಯ ವಿದ್ವಾನ್ ಕುಮಾರಗುರು ತಂತ್ರಿ, ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ.

































