29.1 C
Udupi
Wednesday, June 17, 2026
spot_img
spot_img
HomeBlogಕಾರ್ಕಳ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಾತಿ : ರಾಜ್ಯ ಸರಕಾರಕ್ಕೆ ಧನ್ಯವಾದ ತಿಳಿಸಿದ ಪ್ರತಿಮಾ ರಾಣಿ

ಕಾರ್ಕಳ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಾತಿ : ರಾಜ್ಯ ಸರಕಾರಕ್ಕೆ ಧನ್ಯವಾದ ತಿಳಿಸಿದ ಪ್ರತಿಮಾ ರಾಣಿ

ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳ ಕುರಿತು ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು.

ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಭಾಗದ ಜನರು ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತ್ವರಿತ ಕ್ರಮ ಕೈಗೊಂಡು ಆಸ್ಪತ್ರೆಯಲ್ಲಿ ವೈದ್ಯರ ನೇಮಕಾತಿ ಮಾಡಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಆಸ್ಪತ್ರೆಯ ಸೇವಾ ಗುಣಮಟ್ಟ ಸುಧಾರಣೆ ಹಾಗೂ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಅವರು ತೋರಿದ ಕಾಳಜಿ ಮತ್ತು ಮುತುವರ್ಜಿಗೆ ಧನ್ಯವಾದಗಳು. ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ದೊರಕಿಸಿ ಕೊಡುವಲ್ಲಿ ಸಹಕರಿಸಿದ ರಾಜ್ಯ ಸರ್ಕಾರದ ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಧನ್ಯವಾದಗಳು ಎಂದು ಮಾಜಿ ಪುರಸಭಾ ಅಧ್ಯಕ್ಷೆ ಶ್ರೀಮತಿ ಪ್ರತಿಮಾ ರಾಣೆ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page