
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ,ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 19 ರವರೆಗೆ ಮಳೆಯ ಪ್ರಮಾಣ ಹೆಚ್ಚಿರಲಿದೆ. ಬೆಳಗಾವಿ ,ಧಾರವಾಡ ,ಗದಗ, ಬಳ್ಳಾರಿ ವಿಜಯಪುರದಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ ತುಮಕೂರು ಕೋಲಾರ ಮೈಸೂರು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದೆ. ಆದರೂ ಎಲ್ ನಿನೋ ಆರಂಭವಾದ ಪರಿಣಾಮದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

































