27.3 C
Udupi
Sunday, June 21, 2026
spot_img
spot_img
HomeBlogಕ್ರೈಸ್ಟ್ ಕಿಂಗ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕ್ರೈಸ್ಟ್ ಕಿಂಗ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕೆ, ಯೋಗವೇ ಸರಳ ಮತ್ತು ಪರಿಣಾಮಕಾರಿ ಮಾರ್ಗ: ವಿನಾಯಕ ಕುಡ್ವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ
ಆಚರಿಸಲಾಯಿತು.

ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ
ಸದಸ್ಯರಾದ ವಿನಾಯಕ ಕುಡ್ವರವರು ಮುಖ್ಯ ಅತಿಥಿಗಳಾಗಿ
ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು
“ಆರೋಗ್ಯಕರ ಜೀವನಕ್ಕೆ ಯೋಗವೇ ಸರಳ ಮತ್ತು
ಪರಿಣಾಮಕಾರಿ ಮಾರ್ಗವಾಗಿದೆ. ಬೆಳಗ್ಗಿನ ಓದು ವಿದ್ಯಾರ್ಥಿಗಳ
ಜ್ಞಾನವನ್ನು ಹೆಚ್ಚಿಸಿದರೆ, ಯೋಗವು ಆರೋಗ್ಯವನ್ನು
ಕಾಪಾಡುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ
ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯ
ವೃದ್ದಿಯಾಗುತ್ತದೆ” ಎಂಬುದನ್ನು ತಿಳಿಸಿದರು.

ಸಂಸ್ಥೆಯಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ.
ಕ್ರಿಸ್ಟೋಫರ್ ಕೋಟ್ಯಾನ್‌ರವರು “ವಿದ್ಯಾರ್ಥಿಗಳ ಉತ್ತಮ
ಭವಿಷ್ಯಕ್ಕಾಗಿ ಶಿಕ್ಷಣದ ಜೊತೆಗೆ ಯೋಗಕ್ಕೂ ಮಹತ್ವ
ನೀಡಬೇಕು” ಎಂದು ಹೇಳಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ
ರಾಜ್ಯಮಟ್ಟದ ಯೋಗಪಟು ನಿಖಿಲ್ ಪೂಜಾರಿ ಯೋಗ
ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತಪಡಿಸಿದರು. ಸಂಸ್ಥೆಯ
ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ಯೋಗದ ವಿವಿಧ
ಆಸನಗಳನ್ನು ಪ್ರದರ್ಶಿಸಿದರು. ವೇದಿಕೆಯಲ್ಲಿ ಪ್ರೌಢಶಾಲಾ
ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾರವರು
ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ
ಪ್ರಕಾಶ್ ನಾಯ್ಕ್ ಉಪಸ್ಥಿತರಿದ್ದು, ಸಂಸ್ಥೆಯ ಪ್ರೌಢ ಶಾಲಾ ಶಿಕ್ಷಕಿ
ಶ್ರೀಮತಿ ರೀನಾರವರು ಕಾರ್ಯಕ್ರಮ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page