
ರಾಜ್ಯದಲ್ಲಿ ಮುಂಗಾರು ಚುರುಕುಕೊಂಡಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ, ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


































