
ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಹಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಬಾರಿ ಮಳೆಯ ಸಾಧ್ಯತೆ ಇದೆ.
ಹಾವೇರಿ ,ಗದಗ ಮತ್ತು ಬಾಗಲಕೋಟೆ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.






















