
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಹೆಚ್ಚಿರಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು ,ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.


































