
ಚಿಕ್ಕಬಳ್ಳಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೆ ನಿನ್ನ ಮನೆಯ ವಾಚ್ಮೆನ್ ಆಗುತ್ತೇನೆ. ನೀನು ಸೋತರೆ ಎಚ್.ಡಿ. ಕುಮಾರಸ್ವಾಮಿ ಮನೆಯ ವಾಚ್ಮೆನ್ ಆಗುತ್ತೀಯಾ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್, ಶಾಸಕ ಪ್ರದೀಪ್ ಈಶ್ವರ್ಗೆ ಸವಾಲೆಸೆದಿದ್ದಾರೆ.
ದೇವೇಗೌಡರು ಮತ್ತು ಕುಮಾರಸ್ವಾಮಿ ವಿರುದ್ಧ ಮಾತನಾಡುವುದನ್ನು ಜೆಡಿಎಸ್ ಸಹಿಸುವುದಿಲ್ಲ ಎಂದು ಹೇಳಿದ ಅವರು, ಕುಮಾರಸ್ವಾಮಿ ಪ್ರದೀಪ್ ಈಶ್ವರ್ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ ಉದಾಹರಣೆ ಇದ್ದರೆ ತಾನು ಕ್ಷಮೆ ಕೇಳುವುದಾಗಿ ಹೇಳಿದರು.
ಜೆಡಿಎಸ್ ನಾಯಕರ ವಿರುದ್ಧ ಮಾತನಾಡಿದರೆ ಸಚಿವ ಸ್ಥಾನ ಸಿಗುತ್ತದೆ ಎಂಬ ಭಾವನೆ ಪ್ರದೀಪ್ ಈಶ್ವರ್ಗೆ ಇರಬಹುದು ಎಂದು ಟೀಕಿಸಿದ ಅವರು, ಸ್ಥಳೀಯ ಚುನಾವಣೆಯಲ್ಲಿಯೇ ಕಾಂಗ್ರೆಸ್ಗೆ ಗೆಲುವು ತಂದುಕೊಡಲು ಸಾಧ್ಯವಾಗಿಲ್ಲ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಪ್ರದೀಪ್ ಈಶ್ವರ್ ಅವರ ಕೊಡುಗೆ ಏನು ಎಂಬುದನ್ನು ಜನರ ಮುಂದೆ ಹೇಳಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.


































