
ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.

ಎಸ್ ವಿ ಎಜ್ಯುಕೇಶನ್ ಟ್ರಸ್ಟಿನ ಕೋಶಾಧ್ಯಕ್ಷರಾದ ಐ ರವೀಂದ್ರನಾಥ್ ಪೈ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.
2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ಮೂವತ್ತೈದು ವಿದ್ಯಾರ್ಥಿಗಳನ್ನು ಎಸ್ ವಿ ಎಜುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷರಾದ ಕಾರ್ಕಳ ಕಮಲಾಕ್ಷ ಕಾಮತ್ ಅಭಿನಂದಿಸಿ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.
ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಾಲತಿ ವಸಂತ್ ರಾಜ್ ಕಾಲೇಜಿನ “ವಿದ್ಯಾರ್ಥಿ ನಿಧಿ” ಗೆ ಇಪ್ಪತ್ತೈದು ಸಾವಿರ ರೂಪಾಯಿ ದೇಣಿಗೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಐಡಿ ಕಾರ್ಡ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಚಂದ್ರನಾಥ ಬಜಗೋಳಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರಾಪ್ತಿ ಶೆಟ್ಟಿ , ಉಪಾಧ್ಯಕ್ಷೆ ಸಮೀಕ್ಷಾ, ಕಾರ್ಯದರ್ಶಿ ಪ್ರೇಕ್ಷಾ ಆಚಾರ್ಯ, ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ ವಿ ಎಜ್ಯುಕೇಶನ್ ಟ್ರಸ್ಟಿನ ಕಾರ್ಯದರ್ಶಿ ಕೆ.ಪಿ ಶೆಣೈ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ನೇಮಿರಾಜ ಶೆಟ್ಟಿ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್ ವಂದಿಸಿದರು. ಅಧ್ಯಾಪಕರಾದ ದೇವದಾಸ್ ಕೆರೆಮನೆ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಮಾತುಗಳನ್ನಾಡಿದರು ಮತ್ತು ಸುನಿಲ್ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


































