
ಬೆಂಗಳೂರು: ಆರ್ಎಸ್ಎಸ್ ಹಾಗೂ ಅದರ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯ ಹಂಚಿಕೊಂಡಿದ್ದಾರೆ ಎಂಬ ಆರೋಪದಡಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಈ ಸಂಬಂಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದ್ದು, ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಸಮನ್ಸ್ ನೀಡಿದೆ.
ದೂರಿನಲ್ಲಿ ಉಲ್ಲೇಖಿಸಿರುವಂತೆ, ಪ್ರಿಯಾಂಕ್ ಖರ್ಗೆ ಅವರು 2025ರ ಅಕ್ಟೋಬರ್ನಲ್ಲಿ ‘ಎಕ್ಸ್’ ಖಾತೆಯ ಮೂಲಕ ಹಾಗೂ ಹ್ಯಾರಿಸ್ ನಲಪಾಡ್ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರ್ಎಸ್ಎಸ್ ಕಾರ್ಯಕರ್ತ ಎ. ತೇಜಸ್ ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಮುಂದಿನ ಕ್ರಮ ಕೈಗೊಂಡಿದೆ.





















































































