
ಕರಾವಳಿ ಭಾಗದಲ್ಲಿ ಇಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 3 ರಿಂದ ಮಲೆನಾಡು ಭಾಗಗಳಲ್ಲಿ ತೀವ್ರ ಮಳೆಯ ಎಚ್ಚರಿಕೆ ನೀಡಲಾಗಿದೆ. ಉಡುಪಿ, ಮಂಗಳೂರು, ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಕಾರಣ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು ,ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ,ವಿಜಯನಗರ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ.


































