
ಕಾರ್ಕಳ: ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಹೊಸ ಆಡಳಿತ ಮೊಕ್ತೇಸರರ ಆಯ್ಕೆ ಪ್ರಕ್ರಿಯೆ ಜೂನ್ 28ರಂದು ದೇವಸ್ಥಾನ ಆವರಣದಲ್ಲಿ ನಡೆದ ಮಹಾಸಭೆಯಲ್ಲಿ ನೆರವೇರಿತು. ಈ ಸಭೆಯಲ್ಲಿ ಪಿ. ರವಿ ಆಚಾರ್ಯ ಪೆರ್ವಾಜೆ ಅವರನ್ನು ಆಡಳಿತ ಮೊಕ್ತೇಸರರಾಗಿ ಆಯ್ಕೆ ಮಾಡಲಾಗಿದ್ದು, ನಿಟ್ಟೆ ಸುರೇಶ್ ಆಚಾರ್ಯ ಹಾಗೂ ಪಿ. ವಸಂತ್ ಆಚಾರ್ಯ ಅವರನ್ನು ಸಹ ಮೊಕ್ತೇಸರರಾಗಿ ನೇಮಕ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತ್ತೂರು ಶಿಲ್ಪಿ ರಾಮಚಂದ್ರ ಆಚಾರ್ಯ ವಹಿಸಿದ್ದರು. ವಿಶೇಷ ಅತಿಥಿಯಾಗಿ ಕುದುರೆಮುಖ ವನ್ಯಜೀವಿ ಅಭಯಾರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ಭಾಗವಹಿಸಿದ್ದರು.
ದೇವಸ್ಥಾನದ ಪ್ರಧಾನ ಅರ್ಚಕ ಪುರೋಹಿತ ವಿಟಲ್ ಆಚಾರ್ಯ ಅವರು ಪ್ರಾರ್ಥನೆ ಸಲ್ಲಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ನಿಕಟ ಪೂರ್ವ ಆಡಳಿತ ಮಂಡಳಿಯ ಪರವಾಗಿ ಶಿಲ್ಪಿ ರಾಮಚಂದ್ರ ಆಚಾರ್ಯ ಸ್ವಾಗತ ಕೋರಿದ್ದು ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಎಂ. ರಮೇಶ್ ಆಚಾರ್ಯ ನಿರೂಪಿಸಿದರು.
ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಜುಲೈ 9ರಂದು ದೇವಸ್ಥಾನದಲ್ಲಿ ನಡೆಯಲಿದ್ದು, ಭಕ್ತರು ಹಾಗೂ ಸಮುದಾಯದ ಪ್ರಮುಖರು ಭಾಗವಹಿಸಲಿದ್ದಾರೆ.





















































































