27.7 C
Udupi
Thursday, July 2, 2026
spot_img
spot_img
HomeBlogಬೆಂಗಳೂರು: ಡೇಕೇರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆರೋಪ

ಬೆಂಗಳೂರು: ಡೇಕೇರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆರೋಪ

ವೈರಲ್ ವಿಡಿಯೋ ಬೆನ್ನಲ್ಲೇ ಪ್ರಕರಣ ದಾಖಲು

ಬೆಂಗಳೂರು: ನಗರದ ಡೇಕೇರ್ ಕೇಂದ್ರವೊಂದರಲ್ಲಿ ಪುಟ್ಟ ಮಕ್ಕಳ ಮೇಲೆ ಅಮಾನವೀಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದ್ದು, ಘಟನೆ ಪೋಷಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಎರಡರಿಂದ ಮೂರು ವರ್ಷದೊಳಗಿನ ಮಕ್ಕಳನ್ನು ಮುಂಭಾಗದಿಂದ ಲೋಡ್ ಮಾಡುವ ವಾಷಿಂಗ್ ಮೆಷಿನ್‌ನ ಡ್ರಮ್‌ನಲ್ಲಿ ಕೂರಿಸುವುದು, ಅವರ ಬಾಯಿಗೆ ಟಾಯ್ಲೆಟ್ ಜೆಟ್ ಸ್ಪ್ರೇ ಮೂಲಕ ನೀರು ಸಿಂಪಡಿಸುವುದು ಹಾಗೂ ಅಳುತ್ತಿದ್ದ ಮಕ್ಕಳನ್ನು ಸ್ನಾನಗೃಹದೊಳಗೆ ಬೀಗ ಹಾಕಿ ಇರಿಸುವಂತಹ ಕೃತ್ಯಗಳು ನಡೆದಿರುವ ಆರೋಪ ಕೇಳಿಬಂದಿದೆ.

ಕ್ಯಾಪ್‌ಜೆಮಿನಿಯ ಎಚ್‌ಎಎಲ್ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡೇಕೇರ್ ಕೇಂದ್ರದ ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. “ಮಕ್ಕಳನ್ನು ಮೌನಗೊಳಿಸಲು ಇಂತಹ ಅಮಾನವೀಯ ವಿಧಾನಗಳನ್ನು ಬಳಸಲಾಗುತ್ತಿತ್ತು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸ್ ಠಾಣೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಲಾಗಿದೆ.

ಈ ಪ್ರಕರಣದಿಂದ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕಾರ್ಪೊರೇಟ್ ಕ್ಯಾಂಪಸ್‌ಗಳೊಳಗಿನ ಡೇಕೇರ್ ಕೇಂದ್ರಗಳ ಸುರಕ್ಷತೆ ಮತ್ತು ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆಗಳು ಮೂಡಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page