27 C
Udupi
Friday, July 3, 2026
spot_img
spot_img
HomeBlogರೈಲ್ವೆ ಆವರಣದಲ್ಲಿ ಧೂಮಪಾನ, ಭಿಕ್ಷಾಟನೆಗೆ ಇನ್ಮುಂದೆ ₹2,000 ದಂಡ

ರೈಲ್ವೆ ಆವರಣದಲ್ಲಿ ಧೂಮಪಾನ, ಭಿಕ್ಷಾಟನೆಗೆ ಇನ್ಮುಂದೆ ₹2,000 ದಂಡ

ನವದೆಹಲಿ: ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವುದು ಹಾಗೂ ರೈಲ್ವೆ ಆವರಣದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ ಹೊಸ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ‘ಜನ್ ವಿಶ್ವಾಸ್ ಕಾಯ್ದೆ-2026’ ಅನ್ವಯ ಕೆಲವು ಅಪರಾಧಗಳಿಗೆ ವಿಧಿಸುವ ದಂಡದ ಪ್ರಮಾಣವನ್ನು ಹೆಚ್ಚಿಸಲಾಗಿದೆ.

ಹೊಸ ನಿಯಮದ ಪ್ರಕಾರ ರೈಲು ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು, ಅಗತ್ಯ ಪರವಾನಿಗೆ ಇಲ್ಲದೆ ವ್ಯಾಪಾರ ನಡೆಸುವುದು ಹಾಗೂ ಭಿಕ್ಷಾಟನೆ ನಡೆಸುವುದು ಶಿಕ್ಷಾರ್ಹ ಕೃತ್ಯಗಳಾಗಿದ್ದು, ಇವುಗಳಿಗೆ ಈಗ ₹2,000 ದಂಡ ವಿಧಿಸಲಾಗುತ್ತದೆ. ಈ ಹಿಂದೆ ಇದ್ದ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.

ಈ ನಿಯಮ ಉಲ್ಲಂಘಿಸುವವರ ವಿರುದ್ಧ ರೈಲ್ವೆ ಅಧಿಕಾರಿಗಳು ಅಥವಾ ಪೊಲೀಸರು ಸ್ಥಳದಲ್ಲೇ ದಂಡ ವಿಧಿಸುವ ಅಧಿಕಾರ ಹೊಂದಿದ್ದಾರೆ. ರೈಲ್ವೆ ಆವರಣದಲ್ಲಿ ಶಿಸ್ತು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page