27.9 C
Udupi
Tuesday, July 7, 2026
spot_img
spot_img
HomeBlogಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಹೈಕೋರ್ಟ್

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿಯ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಕ್ರಮವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ.

ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಸಿಸ್ಟರ್ ಆಶಾ ಕ್ರಾಸ್ಟಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ “ಮಗುವನ್ನು ಏಕೆ ಹೊಡೆದರು?” ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಶಿಕ್ಷಕರು ಮಕ್ಕಳಿಗೆ ದೈಹಿಕ ಶಿಕ್ಷೆ ನೀಡುವುದು ಒಪ್ಪಲಾಗದು ಎಂದು ಸ್ಪಷ್ಟಪಡಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ಸುರತ್ಕಲ್ ಠಾಣಾಧಿಕಾರಿ ಹಾಗೂ ದೂರುದಾರರಾದ ಮಗುವಿನ ತಾಯಿ ಶಫ್ರೀನಾ ಅವರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

2026ರ ಜನವರಿ 30ರಂದು ತನ್ನ 6 ವರ್ಷದ ಮಗಳಿಗೆ ಶಿಕ್ಷಕಿ ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಶಫ್ರೀನಾ ದೂರು ನೀಡಿದ್ದರು. ಈ ಆಧಾರದಲ್ಲಿ ಪೊಲೀಸರು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 ಹಾಗೂ ಬಿಎನ್‌ಎಸ್ ಸೆಕ್ಷನ್ 118(1) ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಳಿಕ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣ ಪ್ರಸ್ತುತ ಮಂಗಳೂರಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page