
ಗೋವಾ: 2028ರಲ್ಲಿ ಶತಮಾನೋತ್ಸವ ಆಚರಿಸಲಿರುವ ಅಂತಾರಾಷ್ಟ್ರೀಯ ತುಳುವ ಮಹಾಸಭಾದ ಗೋವಾ ರಾಜ್ಯ ಘಟಕದ ಅಧ್ಯಕ್ಷರಾಗಿ ಉಡುಪಿಯ ಸಾಮಾಜಿಕ ಮುಂದಾಳು ಹಾಗೂ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗಾಗಿ ಹಲವು ವರ್ಷಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಅವರು, ವಿವಿಧ ಸಾಂಸ್ಕೃತಿಕ ಹಾಗೂ ಸಮುದಾಯ ಕಾರ್ಯಕ್ರಮಗಳ ಮೂಲಕ ತುಳುವರನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರಿಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಜಾಡ ಅವರ ನೇತೃತ್ವದಲ್ಲಿ ಈ ನೇಮಕ ಮಾಡಲಾಗಿದೆ.






















