
ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು ಜುಲೈ 16 ಮತ್ತು 17ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯ ಜೊತೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ,ಚಿಕ್ಕಮಗಳೂರು ,ಹಾಸನ, ಕೊಡಗು, ಮೈಸೂರು ,ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.














































