26 C
Udupi
Saturday, July 18, 2026
spot_img
spot_img
HomeBlogಶಿಕ್ಷಕರಿಗೆ ಸಿಹಿಸುದ್ದಿ: KREIS ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ

ಶಿಕ್ಷಕರಿಗೆ ಸಿಹಿಸುದ್ದಿ: KREIS ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಒಟ್ಟು 1,087 ಹುದ್ದೆಗಳ ಪೈಕಿ 767 ಹುದ್ದೆಗಳು ರಾಜ್ಯ ವೃಂದ (RPC) ಹಾಗೂ 320 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದ (KK)ಕ್ಕೆ ಸೇರಿವೆ. ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಕಂಪ್ಯೂಟರ್ ವಿಜ್ಞಾನ, ದೈಹಿಕ ಶಿಕ್ಷಣ ಹಾಗೂ ಚಿತ್ರಕಲಾ ವಿಷಯಗಳ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ ಹಾಗೂ ಬಿ.ಎಡ್. ವಿದ್ಯಾರ್ಹತೆ ಹೊಂದಿದ್ದು, KTET ಅಥವಾ CTET ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗಕ್ಕೆ ಗರಿಷ್ಠ 45 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 48 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಜುಲೈ 15ರಿಂದ ಆರಂಭವಾಗಿದ್ದು, ಆಗಸ್ಟ್ 13 ಕೊನೆಯ ದಿನವಾಗಿದೆ. ಶುಲ್ಕ ಪಾವತಿಗೆ ಆಗಸ್ಟ್ 14 ಅಂತಿಮ ದಿನ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹54,175ರಿಂದ ₹99,400ರವರೆಗೆ ವೇತನ ದೊರೆಯಲಿದೆ.

ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ಪರಿಶೀಲಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page