28.5 C
Udupi
Thursday, July 23, 2026
spot_img
spot_img
HomeBlogHPV ಲಸಿಕೆ ಕಡ್ಡಾಯವಲ್ಲ; ಅಂತಿಮ ನಿರ್ಧಾರ ಪೋಷಕರದ್ದು: ಯು.ಟಿ. ಖಾದರ್

HPV ಲಸಿಕೆ ಕಡ್ಡಾಯವಲ್ಲ; ಅಂತಿಮ ನಿರ್ಧಾರ ಪೋಷಕರದ್ದು: ಯು.ಟಿ. ಖಾದರ್

ಮಂಗಳೂರು: ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV) ಲಸಿಕೆಯನ್ನು ಕಡ್ಡಾಯಗೊಳಿಸುವ ಪ್ರಶ್ನೆಯೇ ಇಲ್ಲ. ಹೆಣ್ಣುಮಕ್ಕಳಿಗೆ ಲಸಿಕೆ ನೀಡಬೇಕೇ ಬೇಡವೇ ಎಂಬ ನಿರ್ಧಾರವನ್ನು ಪೋಷಕರೇ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ HPV ಲಸಿಕಾ ಅಭಿಯಾನ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಆದರೆ ಕರಾವಳಿ ಭಾಗ ಸೇರಿದಂತೆ ಕೆಲವೆಡೆ ಲಸಿಕೆ ಸ್ವೀಕಾರ ಪ್ರಮಾಣ ಕಡಿಮೆಯಿದ್ದು, ತಪ್ಪು ಕಲ್ಪನೆಗಳನ್ನು ನಿವಾರಿಸಲು ಆರೋಗ್ಯ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ಜನರಿಗೆ ಲಸಿಕೆಯ ಮಹತ್ವವನ್ನು ಮನವರಿಕೆ ಮಾಡಬಹುದು. ಆದರೆ ಅದನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಸರ್ಕಾರ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಅಂತಿಮ ತೀರ್ಮಾನ ಪೋಷಕರದ್ದೇ ಎಂದು ಖಾದರ್ ಸ್ಪಷ್ಟಪಡಿಸಿದರು.

ಇದೇ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ ಏಳು ದಿನಗಳ ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದು ಹೇಳಿದರು.

ಈ ಯೋಜನೆಯನ್ನು ಕೇಂದ್ರದ ಪಿಎಂ-ರಾಹತ್ ಯೋಜನೆಯೊಂದಿಗೆ ಜೋಡಿಸಲಾಗುತ್ತದೆ. ಕೇಂದ್ರದ ₹1.5 ಲಕ್ಷ ನೆರವಿಗೆ ರಾಜ್ಯದಿಂದ ₹1 ಲಕ್ಷ ಸೇರಿಸಿ ಒಟ್ಟು ₹2.5 ಲಕ್ಷ ನೆರವು ನೀಡುವ ಉದ್ದೇಶವಿದೆ. ಆಡಳಿತಾತ್ಮಕ ಸಮಸ್ಯೆಗಳಿಂದ ಸಮರ್ಪಕವಾಗಿ ಜಾರಿಯಾಗದ ಯೋಜನೆಯನ್ನು ಸುಧಾರಿಸಿ, ಸಂತ್ರಸ್ತರಿಗೆ ಸಮಯಕ್ಕೆ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರೌಡಿಗಳ ವಿರುದ್ಧ ಪೊಲೀಸರು “ಗುಂಡಿಕ್ಕಬೇಕು” ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದರು. ರೌಡಿಗಳ ವಿರುದ್ಧ ಪೊಲೀಸರು ಇನ್ನಷ್ಟು ಕಠಿಣ ಕ್ರಮ ಕೈಗೊಂಡು, ಕಾನೂನಿನ ಭಯ ಮೂಡಿಸಬೇಕು ಎಂಬುದೇ ತಮ್ಮ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page