
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ವಿವಿಧ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ರಾಯಚೂರು, ಕಲಬುರಗಿ, ಬೀದರ್ ,ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ,ಗದಗ ,ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಂಗಳೂರು, ಮೈಸೂರು, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ.


















































