
ಉಡುಪಿ: ಜುಲೈ 25 ನಾಳೆ ಭಾರಿ ಮಳೆಯ ಮುನ್ಸೂಚನೆ ಇರುವ ಕಾರಣ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ,ಸರಕಾರಿ ,ಅನುದಾನಿತ, ಖಾಸಗಿ ಪ್ರಾಥಮಿಕ ,ಪ್ರೌಢಶಾಲಾ, ಪದವಿಪೂರ್ವ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ,ಇಂಜಿನಿಯರ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


















































