28.8 C
Udupi
Saturday, July 25, 2026
spot_img
spot_img
HomeBlogಮೋದಿ ಸೆಲ್ಫಿ ವಿಡಿಯೋಗೆ ಭಾರೀ ಕ್ರೇಜ್: ಒಂದೇ ರಾತ್ರಿ 11 ಲಕ್ಷ ಹೊಸ ಫಾಲೋವರ್ಸ್

ಮೋದಿ ಸೆಲ್ಫಿ ವಿಡಿಯೋಗೆ ಭಾರೀ ಕ್ರೇಜ್: ಒಂದೇ ರಾತ್ರಿ 11 ಲಕ್ಷ ಹೊಸ ಫಾಲೋವರ್ಸ್

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದರು. ಈ ವಿಡಿಯೋ ಅಪ್‌ಲೋಡ್ ಆದ ಬಳಿಕ ಕೇವಲ ಒಂದೇ ರಾತ್ರಿಯಲ್ಲಿ ಅವರ ಇನ್‌ಸ್ಟಾಗ್ರಾಮ್ ಖಾತೆಗೆ ಸುಮಾರು 11 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆಯಾಗಿದ್ದು, ಒಟ್ಟು ಅನುಯಾಯಿಗಳ ಸಂಖ್ಯೆ 102 ಮಿಲಿಯನ್ ದಾಟಿದೆ.

ವಿಡಿಯೋ ಪೋಸ್ಟ್ ಮಾಡುವ ಮೊದಲು ಪ್ರಧಾನಿ ಮೋದಿ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 101 ಮಿಲಿಯನ್ ಫಾಲೋವರ್ಸ್ ಇದ್ದರು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಸಂಖ್ಯೆ 102 ಮಿಲಿಯನ್‌ಗೇರಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಜನಪ್ರಿಯತೆಯನ್ನು ಮತ್ತೊಮ್ಮೆ ತೋರಿಸಿದೆ.

ನೀಟ್ ಪೇಪರ್ ಲೀಕ್ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆಯೇ ಪ್ರಧಾನಿ ಮೋದಿ ತಮ್ಮ ಮೊಬೈಲ್‌ನ ಸೆಲ್ಫಿ ಕ್ಯಾಮೆರಾದಲ್ಲೇ ಯಾವುದೇ ವೇದಿಕೆ ಅಥವಾ ಸ್ಟುಡಿಯೋ ಇಲ್ಲದೆ ನೇರವಾಗಿ ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ್ದರು. ‘ಜೆನ್-ಝಡ್’ ಶೈಲಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಯಿತು.

ಪೇಪರ್ ಲೀಕ್ ತಡೆಯಲು ಕಠಿಣ ಕಾನೂನು ಜಾರಿ ಹಾಗೂ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಕುರಿತು ಅವರು ಈ ವಿಡಿಯೋದಲ್ಲಿ ಪ್ರಸ್ತಾಪಿಸಿದ್ದರು. ವಿಡಿಯೋ ಕೋಟ್ಯಂತರ ವೀಕ್ಷಣೆಗಳನ್ನು ಪಡೆದಿದ್ದು, ಅದರೊಂದಿಗೆ ಲಕ್ಷಾಂತರ ಮಂದಿ ಹೊಸದಾಗಿ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಫಾಲೋ ಮಾಡಿದ್ದಾರೆ.

ಪ್ರಧಾನಿ ಮೋದಿ ಈಗಾಗಲೇ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಜಾಗತಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 100 ಮಿಲಿಯನ್‌ಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಅವರು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಕೆ ಪ್ರಧಾನಮಂತ್ರಿ ಸೇರಿದಂತೆ ಹಲವು ವಿಶ್ವ ನಾಯಕರಿಗಿಂತ ಹೆಚ್ಚಿನ ಫಾಲೋವರ್ಸ್ ಹೊಂದಿದ್ದಾರೆ.

ಐಶೋಸ್ಪೀಡ್ ದಾಖಲೆಯನ್ನೂ ಹಿಂದಿಕ್ಕಿದ ಮೋದಿ

ಇನ್‌ಸ್ಟಾಗ್ರಾಮ್ ವೀಕ್ಷಣೆಗಳಲ್ಲೂ ಪ್ರಧಾನಿ ಮೋದಿ ಹೊಸ ದಾಖಲೆ ನಿರ್ಮಿಸಿದ್ದಾರೆ ಎನ್ನಲಾಗಿದೆ. 2026ರ ಫಿಫಾ ವಿಶ್ವಕಪ್ ಫೈನಲ್ ವೇಳೆ BTS ತಂಡವನ್ನು ಭೇಟಿಯಾದ ಐಶೋಸ್ಪೀಡ್ ಅವರ ರೀಲ್ಸ್ 24 ಗಂಟೆಗಳಲ್ಲಿ 300 ಮಿಲಿಯನ್ ವೀಕ್ಷಣೆ ಪಡೆದು ದಾಖಲೆ ಮಾಡಿತ್ತು. ಆದರೆ ಪ್ರಧಾನಿ ಮೋದಿ ಅವರ ಹೊಸ ರೀಲ್ಸ್ ಕೇವಲ 24 ಗಂಟೆಗಳಲ್ಲಿ 303 ಮಿಲಿಯನ್‌ಗಿಂತ ಹೆಚ್ಚು ವೀಕ್ಷಣೆ ಪಡೆದು ಆ ದಾಖಲೆಯನ್ನು ಹಿಂದಿಕ್ಕಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page