
ಉಡುಪಿ: ಕಾಂಗ್ರೆಸ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಡಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ತಿಳಿಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಯಶ್ ಪಾಲ್ ಸುವರ್ಣ ಅವಹೇಳನಕಾರಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


















































