
ತೀರ್ಥಹಳ್ಳಿ: ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದ್ದು ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಗುಡ್ಡ ಕುಸಿತದ ಕಾರಣ ಒಂದೇ ಕುಟುಂಬದ ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ.
ರವಿವಾರ ನಸುಕಿನ 2:30 ರ ವೇಳೆಗೆ ಗುಡ್ಡ ಕುಸಿದಿದ್ದು ಕೆಳಭಾಗದಲ್ಲಿ ಷಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮ ಮೂಲದ ಮಲ್ಲಿಕಾರ್ಜುನ (35) ನಾಗವೇಣಿ (28) ಸಂತೋಷ (3) ಮೂವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡು ಮತಪಟ್ಟಿದ್ದಾರೆ. ಪಕ್ಕದ ಶೆಡ್ಡಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯಚಾಮ ರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳ ಮೃತ ದೇಹ ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ನಡೆದಿದೆ.























































