
ರಾಜ್ಯದಲ್ಲಿ ನೈರುತ್ಯ ಮಾರುತ ಚುರುಕುಕೊಂಡಿದ್ದು, ಮುಂದಿನ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಿಲಿದ್ದು ,ಹೆಚ್ಚಿನ ಮಳೆಯಾಗಲಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.























































