27.5 C
Udupi
Tuesday, August 4, 2026
spot_img
spot_img
HomeBlogಹೇಳಿಕೆ ತಿರುಚಿದವರ ವಿರುದ್ಧ ತನಿಖೆಗೆ ಆದೇಶ: ಪ್ರಿಯಾಂಕ್ ಖರ್ಗೆ

ಹೇಳಿಕೆ ತಿರುಚಿದವರ ವಿರುದ್ಧ ತನಿಖೆಗೆ ಆದೇಶ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸ್ ನೇಮಕಾತಿ ಪರೀಕ್ಷೆಗಳ ಕುರಿತು ತಮ್ಮ ಹೇಳಿಕೆಯನ್ನು ತಿರುಚಿ ಸುಳ್ಳು ಮಾಹಿತಿ ಹರಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ವಿಜಯಪುರ ಘಟನೆ ಸಂಬಂಧ ಬಿಜೆಪಿ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಮ್ಮ ರಾಜೀನಾಮೆ ಕೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ತಾವು ಉತ್ತರಿಸಿದ್ದಾಗಿ ಸ್ಪಷ್ಟಪಡಿಸಿದರು.

“ನನ್ನನ್ನು ಕೇಳಿದ್ದು, ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿರುವ ಬಗ್ಗೆ ನನ್ನ ಪ್ರತಿಕ್ರಿಯೆ ಏನು ಎಂಬ ಪ್ರಶ್ನೆ. ಅದಕ್ಕೆ, ‘ನನ್ನ ರಾಜೀನಾಮೆಗಾಗಿ ಬಿಜೆಪಿ 25 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದರೆ ನಾನು ಯೋಚಿಸುತ್ತೇನೆ’ ಎಂದು ಹೇಳಿದ್ದೆ. ಅದು ಬಿಜೆಪಿಯ ರಾಜಕೀಯ ನಾಟಕಕ್ಕೆ ನೀಡಿದ ಉತ್ತರವೇ ಹೊರತು, ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದಲ್ಲ” ಎಂದು ಹೇಳಿದರು.

ಬಿಜೆಪಿ ಆಡಳಿತದಲ್ಲೇ ಪಿಎಸ್‌ಐ ನೇಮಕಾತಿ ಹಗರಣ ನಡೆದಿತ್ತು ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಬದ್ಧವಾಗಿದೆ ಎಂದರು.

ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿ ಪ್ರಸಾರ ಮಾಡಿದವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.

“ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಜೊತೆಗೆ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ಹರಡಲಾಗಿದೆ. ಇದು ಪತ್ರಿಕೋದ್ಯಮವಲ್ಲ, ಜನರನ್ನು ದಾರಿ ತಪ್ಪಿಸುವ ಮತ್ತು ಸಾರ್ವಜನಿಕ ನಂಬಿಕೆಯನ್ನು ಕುಂದಿಸುವ ದುರುದ್ದೇಶದ ತಪ್ಪು ಮಾಹಿತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಸಂಪೂರ್ಣ ಸಂಭಾಷಣೆಯನ್ನು ಜನರ ಮುಂದೆ ಇಡಿ. ರಾಜೀನಾಮೆ ಕೇಳಿದ್ದು ಬಿಜೆಪಿ, ಅದಕ್ಕೆ ನಾನು ಉತ್ತರಿಸಿದ್ದೆ. ಕೆಲವರು ಮಾತ್ರ ನನ್ನ ಹೇಳಿಕೆಯನ್ನು ಆಯ್ದ ಭಾಗಗಳ ಮೂಲಕ ತಿರುಚಿ ಬಿಂಬಿಸಿದ್ದಾರೆ. ಈಗ ತನಿಖೆ ಆರಂಭವಾಗಿರುವುದರಿಂದ ಆಯ್ದ ಭಾಗಗಳನ್ನು ತೋರಿಸುವ ಬದಲು ಸಂಪೂರ್ಣ ವಾಸ್ತವಾಂಶವನ್ನು ತನಿಖೆ ಮುಂದೆ ಇಡಿ ” ಎಂದು ಆಗ್ರಹಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page