28.2 C
Udupi
Thursday, August 6, 2026
spot_img
spot_img
HomeBlogಕರ್ನಾಟಕದಲ್ಲಿ 1.10 ಕೋಟಿ ಮತದಾರರ ಹೆಸರು ಪಟ್ಟಿಯಿಂದ ರದ್ದು..?

ಕರ್ನಾಟಕದಲ್ಲಿ 1.10 ಕೋಟಿ ಮತದಾರರ ಹೆಸರು ಪಟ್ಟಿಯಿಂದ ರದ್ದು..?

ಆ.8ರೊಳಗೆ SIR ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಇದುವರೆಗೆ ಸುಮಾರು 1.10 ಕೋಟಿ (ಶೇ.20.02) ಮತದಾರರ ಹೆಸರನ್ನು ಹಾಲಿ ಮತದಾರರ ಪಟ್ಟಿಯಿಂದ ರದ್ದಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೇ 49.34 ಲಕ್ಷ (ಶೇ.47.75) ಮತದಾರರ ಹೆಸರು ರದ್ದಾಗುವ ಪಟ್ಟಿಯಲ್ಲಿ ಸೇರಿದೆ. ರದ್ದುಗೊಳಿಸುವ ಪಟ್ಟಿಯಲ್ಲಿರುವವರಲ್ಲಿ 16.27 ಲಕ್ಷ ಮಂದಿ ಪತ್ತೆಯಾಗದವರು, 66.62 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 16.31 ಲಕ್ಷ ಮಂದಿ ಮೃತಪಟ್ಟವರು, 6.90 ಲಕ್ಷ ಮಂದಿ ಬೇರೆಡೆ ಮತದಾರರಾಗಿ ನೋಂದಾಯಿಸಿಕೊಂಡವರು ಹಾಗೂ 4.85 ಲಕ್ಷ ಮಂದಿ ಇತರೆ ಕಾರಣಗಳಿಗೆ ಸೇರಿದ್ದಾರೆ ಎಂದು ವಿವರಿಸಿದರು. ತಪ್ಪಾಗಿ ಈ ಪಟ್ಟಿಗೆ ಸೇರ್ಪಡೆಯಾಗಿರುವ ಅರ್ಹ ಮತದಾರರು ಆಗಸ್ಟ್ 8ರೊಳಗೆ ಸಂಬಂಧಿತ ಬಿಎಲ್‌ಒ ಅವರನ್ನು ಸಂಪರ್ಕಿಸಿ ವಿವರಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಪ್ರಸ್ತುತ 5.54 ಕೋಟಿ ಮತದಾರರು ಇದ್ದು, ಕಳೆದ 37 ದಿನಗಳಿಂದ ನಡೆಯುತ್ತಿರುವ SIR ಪ್ರಕ್ರಿಯೆಯಡಿ ಎಲ್ಲ ಮತದಾರರಿಗೂ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವ ವಿಶ್ವಾಸವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು ಆ.8ರ ಬಳಿಕ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಫಾರ್ಮ್-6 ಹಾಗೂ ನಿಗದಿತ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು.

2002ರ ಪಟ್ಟಿಯಲ್ಲಿ ಪೋಷಕರ ಹೆಸರು ಇಲ್ಲದಿದ್ದರೆ ಏನು ಮಾಡಬೇಕು?
2002ರ SIR ಪಟ್ಟಿಯಲ್ಲಿ ಪೋಷಕರ ಹೆಸರು ಇಲ್ಲದಿದ್ದರೂ ಗಣತಿ ನಮೂನೆಯನ್ನು ಭರ್ತಿ ಮಾಡದೆ ಬಿಡಬಾರದು. ಅರ್ಜಿಗೆ ಸಹಿ ಮಾಡಿ ಬಿಎಲ್‌ಒಗೆ ಸಲ್ಲಿಸಿದರೆ ಅದನ್ನು ಡಿಜಿಟಲೀಕರಣಗೊಳಿಸಲಾಗುತ್ತದೆ. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಬಳಿಕ ಚುನಾವಣಾ ಆಯೋಗ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಿದೆ. ದಾಖಲೆಗಳನ್ನು ಸಲ್ಲಿಸಿದರೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page