
ರಾಜ್ಯದ ಮೂರು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಬೀದರ್ ಗದಗ ಹಾವೇರಿ ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ ,ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ.






















