
ಕಾರ್ಕಳ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಕಳ ನಗರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.ಆಗಸ್ಟ್ 13, 2026ರ ಗುರುವಾರ ಸಂಜೆ 7 ಗಂಟೆಗೆ ನಡೆಯಲಿದ್ದು, ಕಾರ್ಕಳ ಅನಂತಶಯನದಿಂದ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ಪಂಜಿನ ಮೆರವಣಿಗೆ ಸಾಗಲಿದೆ.

ಕಾರ್ಯಕ್ರಮದಲ್ಲಿ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಗಣ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಅಖಂಡ ಭಾರತದ ಸಂಕಲ್ಪದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ.ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಹಿಂದೂ ಸಮಾಜದ ಬಂಧುಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

























































