ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ಯೋಗಾಸನ ಸ್ಪರ್ಧೆ: ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಮೇಘನಾ ಪರಸಪ್ಪರವರು ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದಲ್ಲಿ ವಿಜೇತರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ನಕ್ರೆ ಇಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಕನ್ನಡ ಮಾಧ್ಯಮ ವಿಭಾಗದ ಎಂಟನೆಯ ತರಗತಿಯ ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಮೇಘನಾ ಪರಸಪ್ಪ ಇವರು ಎಂಟನೆಯ ತರಗತಿ 14 ರ ವಯೋಮಿತಿಯಲ್ಲಿ ಯೋಗಾಸನ ರಿದಮಿಕ್ ಪೇರ್ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾಗಿದ್ದಾರೆ. ಹಾಗೂ ಸಮಾಜ ಕಲ್ಯಾಣ ಇಲಾಖೆ ಡಾ. ಬಿ. ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಕಾರ್ಕಳ ಇಲ್ಲಿನ ನಿಲಯದ ವಿದ್ಯಾರ್ಥಿಗಳಾಗಿರುತ್ತಾರೆ,ಇವರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಬಂಧುಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.






















