
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಪ್ರತಿಷ್ಠಿತ ತಾಜ್ ಹೋಟೆಲ್‌ನಲ್ಲಿ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಂದೆಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ನಾಗವಾರ ಮೂಲದ 40 ವರ್ಷದ ಇಮ್ರಾನ್ ತನ್ನ 10 ವರ್ಷದ ಪುತ್ರಿ ಶೇಖ್ ಜೋಯಾ ಹಾಗೂ 5 ವರ್ಷದ ಪುತ್ರಿ ಶೇಖ್ ಜಿಹಾರ ಅವರನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಟೆಲ್ ಕೊಠಡಿಯಿಂದ ಚೀರಾಟದ ಶಬ್ದ ಕೇಳಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿದ್ದು ಈ ವೇಳೆ ಇಮ್ರಾನ್ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
ಆದರೆ ಇಬ್ಬರು ಮಕ್ಕಳು ಮೃತಪಟ್ಟಿರುವುದು ಬಳಿಕ ದೃಢಪಟ್ಟಿದೆ. ಘಟನೆಗೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕುಟುಂಬದ ಹಿನ್ನೆಲೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದ್ದು, ಘಟನೆಯ ಹಿಂದಿನ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

























































