28.9 C
Udupi
Tuesday, August 11, 2026
spot_img
spot_img
HomeBlogಫೇಸ್‌ಬುಕ್ ವೀಡಿಯೋ ನಂಬಿ ಷೇರು ಹೂಡಿಕೆ: ಕಾರ್ಕಳದ ವ್ಯಕ್ತಿಗೆ ₹32.68 ಲಕ್ಷ ವಂಚನೆ

ಫೇಸ್‌ಬುಕ್ ವೀಡಿಯೋ ನಂಬಿ ಷೇರು ಹೂಡಿಕೆ: ಕಾರ್ಕಳದ ವ್ಯಕ್ತಿಗೆ ₹32.68 ಲಕ್ಷ ವಂಚನೆ

ಕಾರ್ಕಳ: ಫೇಸ್‌ಬುಕ್‌ನಲ್ಲಿ ಬಂದ ವೀಡಿಯೋವೊಂದನ್ನು ನಂಬಿ ಷೇರು ಹಾಗೂ ಐಪಿಒಗಳಲ್ಲಿ ಹೂಡಿಕೆ ಮಾಡಿದ ಕಾರ್ಕಳದ ವ್ಯಕ್ತಿಯೊಬ್ಬರು ₹32.68 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.

ಲಕ್ಷ್ಮಣ್ ಎಂಬವರಿಗೆ ಜುಲೈ 17ರಂದು ಫೇಸ್‌ಬುಕ್‌ನಲ್ಲಿ ವಿಡಿಯೋವೊಂದು ಬಂದಿದ್ದು, JB (Julius Baer VIP Group) ಹಾಗೂ 5paisa ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಅದರಲ್ಲಿ ತಿಳಿಸಲಾಗಿತ್ತು. ವಿಡಿಯೋದಲ್ಲಿದ್ದ ಲಿಂಕ್‌ನ್ನು ಕ್ಲಿಕ್ ಮಾಡಿದ ಬಳಿಕ ಅವರು JB ಮತ್ತು 5paisa ಹೆಸರಿನ ವಾಟ್ಸಪ್ ಗ್ರೂಪ್‌ಗೆ ಸೇರ್ಪಡೆಯಾಗಿದ್ದರು.

ಗ್ರೂಪ್‌ನಲ್ಲಿದ್ದ ಅಪರಿಚಿತರು ಷೇರು ಹಾಗೂ IPOಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯಲಿದೆ ಎಂದು ಲಕ್ಷ್ಮಣ್ ಅವರನ್ನು ನಂಬಿಸಿದ್ದಾರೆ. ಇದನ್ನು ನಂಬಿದ ಅವರು ಜುಲೈ 17ರಿಂದ ಆಗಸ್ಟ್ 4ರವರೆಗೆ ಹಂತ ಹಂತವಾಗಿ ಒಟ್ಟು ₹32,68,000 ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಆದರೆ ಹಣ ಹೂಡಿಕೆ ಮಾಡಿದ ಬಳಿಕವೂ ಹೂಡಿಕೆಯ ಮೊತ್ತವಾಗಲಿ, ಲಾಭಾಂಶವಾಗಲಿ ವಾಪಸ್ ನೀಡದೆ ಅಪರಿಚಿತರು ವಂಚಿಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಣ್ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page