
ಕಾರ್ಕಳ, ಆಗಸ್ಟ್ 8: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ 2026ರ ಆಗಸ್ಟ್ 8 ರಂದು ಮೂರನೇ ತರಗತಿಯಿಂದ ಆರನೇ ತರಗತಿಯವರೆಗಿನ ಮಕ್ಕಳ ಪೋಷಕರಿಗಾಗಿ
” Parents day Out ” ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಅವರು ಉದ್ಘಾಟಿಸಿದರು. ಪೋಷಕರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳು ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪೋಷಕರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಪೋಷಕರ ಸಕ್ರಿಯ ಭಾಗವಹಿಸುವಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್, ಪೋಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.



























































