28.4 C
Udupi
Wednesday, August 12, 2026
spot_img
spot_img
HomeBlogಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ

ಬೆಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ತಂಬಾಕು ಹಾಗೂ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ.

ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ಆಯುಕ್ತರು ಆಗಸ್ಟ್ 10ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ.

ಅಧಿಸೂಚನೆಯ ಅನ್ವಯ, ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಯಾವುದೇ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇಂತಹ ಉತ್ಪನ್ನಗಳು ನಿಷೇಧದ ವ್ಯಾಪ್ತಿಗೆ ಬರುತ್ತವೆ. ಉತ್ಪನ್ನದ ಹೆಸರು ಅಥವಾ ಪ್ಯಾಕಿಂಗ್ ವಿಧಾನ ಬದಲಾಗಿದ್ದರೂ, ಅಂತಿಮ ಉತ್ಪನ್ನದಲ್ಲಿ ತಂಬಾಕು ಅಥವಾ ನಿಕೋಟಿನ್ ಇದ್ದರೆ ನಿಷೇಧ ಅನ್ವಯವಾಗಲಿದೆ.

ಇನ್ನು ಗ್ರಾಹಕರು ನಂತರದಲ್ಲಿ ಬೆರೆಸಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಪದಾರ್ಥಗಳನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವುದು ಅಥವಾ ವಿತರಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ಹಾಗೂ ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಗಳು, 2011ರ ಅಡಿಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಅಧಿಸೂಚನೆ ಹೊರಡಿಸಿದ ದಿನದಿಂದಲೇ ನಿಷೇಧ ಜಾರಿಗೆ ಬಂದಿದ್ದು, ಮುಂದಿನ ಒಂದು ವರ್ಷದವರೆಗೆ ಕರ್ನಾಟಕದಾದ್ಯಂತ ಮುಂದುವರಿಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page