
ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯುವ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸುವ ಹಿಂದೂ ಸಂಘಟನೆಯ ಮುಖಂಡರಿಗೆ ಜಿಲ್ಲೆಗೆ ಪ್ರವೇಶ ನಿಷೇಧ ಹೇರಿರುವುದನ್ನು ವಿಶ್ವಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ..
ಪ್ರತೀ ವರ್ಷ ಜಿಲ್ಲೆಯಲ್ಲಿ ಆಯೋಜಿಸಲಾಗುವ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಈ ದೇಶಕ್ಕಾಗಿ ಬಲಿದಾನ ಗೈದ ವೀರ ಪುರುಷರ ಇತಿಹಾಸವನ್ನು ತಿಳಿಸುವ ಕಾರ್ಯಕ್ರಮ ಹಾಗೂ ಯುವ ಸಮುದಾಯವನ್ನು ಜಾಗೃತಗೊಳಿಸುವ ಕಾರ್ಯವಾಗಿರುದು ಬಿಟ್ಟರೆ ಸಮಾಜದಲ್ಲಿ ಯಾವುದೇ ಅಶಾಂತಿ ನಿರ್ಮಾಣ ಮಾಡುವ ಕಾರ್ಯಕ್ರಮವಾಗಿರುವುದಿಲ್ಲ..ಈ ಕಾರ್ಯಕ್ರಮಕ್ಕೆ ಆಗಮಿಸುವ ಬಜರಂಗದಳ ಮುಖಂಡರಾದ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ ಯವರಿಗೆ ಈ ಜಿಲ್ಲೆಗೆ ನಿಷೇಧ ಹೇರಿರುವುದು ಈ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಈ ರೀತಿಯಾದ ಹಿಂದೂ ದಮನಕಾರಿ ಕ್ರಮವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಬ್ರಹತ್ ಪ್ರತಿಭಟನೆಯನ್ನು ಎಲ್ಲಾ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ವಿಶ್ವಹಿಂದೂ ಪರಿಷದ್ ನೇತೃತ್ವದಲ್ಲಿ ನಡೆಸಬೇಕಾಗಿತ್ತದೆ ಎಂದು ವಿಶ್ವಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ತಿಳಿಸಿದ್ದಾರೆ




























































