ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಭಕ್ತಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುವ ಸರ್ಕಾರ, ಜಿಲ್ಲಾಡಳಿತ ಕ್ರಮಕ್ಕೆ ಹಿಂ.ಜಾ.ವೇ ಖಂಡನೆ

ಕಾರ್ಕಳ ಸ್ವಾತಂತ್ರ್ಯ ದಿನಾಚರಣೆಯ ಪವಿತ್ರ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯು ದೇಶ ಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಆಯೋಜಿಸುವ ಕಾರ್ಯಕ್ರಮಗಳಿಗೆ ಹಿಂದು ಮುಖಂಡರಿಗೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಅನಗತ್ಯ ನಿರ್ಭಂದ ಹೇರಿರುವುದನ್ನು ಹಿಂದು ಜಾಗರಣ ವೇದಿಕೆ ಕಾರ್ಕಳ ತೀವ್ರವಾಗಿ ಖಂಡಿಸುತ್ತದೆ.
ರಾಜ್ಯದ ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ಹಿಂದುಗಳ ಧಾರ್ಮಿಕ ಹಾಗೂ ರಾಷ್ಟ್ರಭಕ್ತಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತ್ತಿದೆ. ಹಿಂದು ಮುಖಂಡರಿಗೆ, ಕಾರ್ಯಕರ್ತರಿಗೆ ಮಾತನಾಡುವ ಸ್ವಾತಂತ್ರ್ಯ, ಸಂಘಟಿಸುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ.
“ಸ್ವತಂತ್ರ ಭಾರತದಲ್ಲಿ ಹಿಂದುಗಳಿಗೆ ಸ್ವಾತಂತ್ರ್ಯವಿಲ್ಲವೇ?” ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಹಿಂದುಗಳ ಮನದಲ್ಲಿ ಮೂಡಿದೆ.
ಈ ಅಕ್ರಮ ಮತ್ತು ಹಿಂದು ವಿರೋಧಿ ನೀತಿಯನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಹಿಂದು ಜಾಗರಣ ವೇದಿಕೆ ಕಾರ್ಕಳ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು
ಹಿಂದು ಜಾಗರಣ ವೇದಿಕೆ ಕಾರ್ಕಳ ತಾಲೂಕು ಸಂಯೋಜಕರಾದ ಸುಜಿತ್ ಸಫಾಲಿಗ ತಿಳಿಸಿದ್ದಾರೆ.






















