
ನವದೆಹಲಿ: ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಿದ್ಧತೆ ನಡೆಸುತ್ತಿದೆ ಎಂಬ ಸುಳಿವು ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ ಜಂತರ್ ಮಂತರ್‌ನಲ್ಲಿ ಮುಂದಿನ ಪ್ರತಿಭಟನೆ ಯಾವಾಗ ನಡೆಯಲಿದೆ ಎಂಬುದಾಗಿ ಹಲವರು ಇನ್‌ಸ್ಟಾಗ್ರಾಂ ಮೂಲಕ ಪ್ರಶ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ‘ಸೀಸನ್ 2’ ಆರಂಭಿಸುವುದಾಗಿ ಹೇಳಿದ್ದಾರೆ.
ಆದರೆ, ಪ್ರತಿಭಟನೆ ಯಾವ ದಿನ ನಡೆಯಲಿದೆ ಹಾಗೂ ಯಾವ ವಿಷಯವನ್ನು ಮುಂದಿಟ್ಟುಕೊಂಡು ಅಭಿಯಾನ ನಡೆಸಲಾಗುತ್ತದೆ ಎಂಬುದರ ಕುರಿತು ಅವರು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಇದೇ ವೇಳೆ, ಸಿಜೆಪಿ ಸಭೆ ನಡೆಸಲು ಸೂಕ್ತ ಸ್ಥಳಾವಕಾಶ ದೊರೆಯುತ್ತಿಲ್ಲ ಎಂಬ ಆರೋಪವನ್ನೂ ದೀಪ್ಕೆ ಮಾಡಿದ್ದಾರೆ.




























































