
ರಾಜ್ಯದಲ್ಲಿ ಮುಂಗಾರು ಚುರುಕುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ,ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಬೆಂಗಳೂರು ಜಿಲ್ಲೆಗಳಲ್ಲಿ ಗಾಳಿಯ ಜೊತೆ ಸಾಧಾರಣ ಮಳೆಯಾಗಲಿದೆ.




























































