28.8 C
Udupi
Friday, August 14, 2026
spot_img
spot_img
HomeBlogಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಅಶ್ಲೀಲ ವಿಡಿಯೋಗಳಿಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಪಿ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಅಶ್ಲೀಲ ವಿಡಿಯೋಗಳಿಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿದ್ದು, ಅವುಗಳಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿಲ್ಲ ಎಂದು ಎಲೆಕ್ಟ್ರಾನಿಕ್ಸ್‌ ಸಿಟಿ ಡಿಸಿಪಿ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 11ರಂದು ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ರೆಡ್ಮಿ ಮೊಬೈಲ್, ಚಾರ್ಜರ್, ಸಿಮ್, ಪೆನ್‌ಡ್ರೈವ್ ಹಾಗೂ ಡೈರಿ ಪತ್ತೆಯಾಗಿತ್ತು. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೋಗಳಿವೆ ಎಂಬ ಮಾಧ್ಯಮ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಡಿಸಿಪಿ ತಿಳಿಸಿದ್ದಾರೆ.

ಪತ್ತೆಯಾದ ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಮೊಬೈಲ್ ಜೈಲಿನೊಳಗೆ ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರೈ ಅವರನ್ನು ಇನ್ನೂ ವಿಚಾರಣೆ ನಡೆಸಿಲ್ಲ. ಅಗತ್ಯ ಸಾಕ್ಷ್ಯಗಳು ಲಭ್ಯವಾದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಜೈಲಿನಲ್ಲಿ ಜಾಮರ್ ಅಳವಡಿಸಿದ್ದರೂ 2ಜಿ ಹಾಗೂ 3ಜಿ ನೆಟ್‌ವರ್ಕ್ ಲಭ್ಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳ ಕುರಿತು ರೆಡ್ಮಿ ಕಂಪನಿಗೂ ಪತ್ರ ಬರೆಯಲು ಪೊಲೀಸರು ಮುಂದಾಗಿದ್ದಾರೆ.

ಇದೇ ವೇಳೆ, ಆಗಸ್ಟ್ 11ರಂದು ಜೈಲು ಸಿಬ್ಬಂದಿ ನಡೆಸಿದ ಅನಿರೀಕ್ಷಿತ ತಪಾಸಣೆಯಲ್ಲಿ ಭದ್ರತಾ ವಿಭಾಗದ ಖಾಲಿ ಜಾಗದಲ್ಲಿನ ಕಲ್ಲುಗಳ ಕೆಳಗೆ ಸಿಮ್ ಇಲ್ಲದ ಎರಡು ರೆಡ್ಮಿ ಆಂಡ್ರಾಯ್ಡ್ ಫೋನ್‌ಗಳು ಹಾಗೂ 32 ಜಿಬಿ ಪೆನ್‌ಡ್ರೈವ್ ಪತ್ತೆಯಾಗಿತ್ತು. ನಿಷೇಧಿತ ವಸ್ತುಗಳನ್ನು ಜೈಲಿಗೆ ತಂದವರು ಹಾಗೂ ಬಳಸಿದವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page