ಸಾಣೂರು ರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು..
ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಅವರಿಂದ ಶುಭ ಹಾರೈಕೆ

ಸಾಣೂರು, ಕಾರ್ಕಳ: ಉಡುಪಿಯಲ್ಲಿ ದಿನಾಂಕ:- 13/08/2026 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು, ಸಾಣೂರು, ಕಾರ್ಕಳದ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ.
ಬೈಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು ಉಷಾರಾಣಿ ಅವರು Rhythmic Pair Yoga ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಅವರ ಅದ್ಭುತ ಸಾಧನೆಯೊಂದಿಗೆ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನ ( ರಿ. ) ದ ಅಧ್ಯಕ್ಷರಾದ ಶ್ರೀ. ದೇವಿಪ್ರಸಾದ್ ಶೆಟ್ಟಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲಿಯೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.




























































