
ಮಂಗಳೂರು:ಮೇ 19: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ಶಾಸಕ ಹರೀಶ್ ಪೂಂಜಾ ಆಪ್ತರನ್ನು ಪೊಲೀಸರು ಬಂಧಿಸಿದ್ದ ಸಂಬಂಧ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜ ಧರಣಿ ನಡೆಸಿದ್ದಾರೆ.
ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಅಂತಾ PSI ಮುರಳೀಧರ್ ನಾಯ್ಕ್‌ಗೆ ಶಾಸಕ ಹರೀಶ್ ಪೂಂಜ ಹೇಳಿದ್ದು ಹೀಗಾಗಿ ಐಪಿಸಿ ಸೆಕ್ಷನ್ 353, 504ರಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಅತ್ತ ಬಂಧನವಾಗುತ್ತಿದ್ದಂತೆ ಇತ್ತ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ, ಕಾರ್ಯಕರ್ತರು ಧರಣಿ ಮಾಡಿದ್ದಾರೆ. ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.