29.1 C
Udupi
Sunday, August 16, 2026
spot_img
spot_img
HomeBlog"ನಾನು ಸುಮ್ಮನಿದ್ದೇನೆ, ಆದರೆ ಖಂಡಿತವಾಗಿಯೂ ಮೌನವಾಗಿಲ್ಲ": ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

“ನಾನು ಸುಮ್ಮನಿದ್ದೇನೆ, ಆದರೆ ಖಂಡಿತವಾಗಿಯೂ ಮೌನವಾಗಿಲ್ಲ”: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೇ 28ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಮೌನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಸುಮ್ಮನಿದ್ದೇನೆ, ಆದರೆ ಮೌನವಾಗಿಲ್ಲ. ಹೆಚ್ಚು ಮಾತನಾಡುವುದಿಲ್ಲ ಅಷ್ಟೇ” ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ರಾಜ್ಯದ ಜವಾಬ್ದಾರಿ ತಮ್ಮ ಮೇಲಿತ್ತು. ಇದೀಗ ತಾವು ಕೇವಲ ಶಾಸಕ ಎಂದು ತಿಳಿಸಿದರು.

ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದು “ಒಬ್ಬ ಮಹಿಳಾ ಸಚಿವರು ಇರಲಿದ್ದಾರೆ” ಎಂದರು.

ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸದ್ಯ ಒಂದು ಸ್ಥಾನ ಖಾಲಿಯಿದ್ದು, ಅದನ್ನು ಮಹಿಳೆಗೆ ನೀಡುವ ಸಾಧ್ಯತೆ ಇದೆ. ಶಿವಣ್ಣನವರ್ ಹಾಗೂ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರನ್ನು ಸೇರ್ಪಡೆಗೊಳಿಸುವ ನಿರ್ಧಾರವಾದರೆ ಸಂಪುಟ ಪುನಾರಚನೆ ಸಾಧ್ಯತೆಯೂ ಇದೆ.

ಮಹಿಳಾ ಸಚಿವರಿಲ್ಲದಿರುವುದಕ್ಕೆ ಬಿಜೆಪಿ ಟೀಕಿಸುತ್ತಿರುವುದನ್ನೂ ಸಿದ್ದರಾಮಯ್ಯ ಪ್ರಶ್ನಿಸಿದರು. “ಬಿಜೆಪಿಗೆ ಯಾವ ನೈತಿಕತೆ ಇದೆ? ಅವರ ಸಂಪುಟದಲ್ಲಿ ಒಬ್ಬ ಅಲ್ಪಸಂಖ್ಯಾತ ಸಚಿವರೂ ಇರಲಿಲ್ಲ” ಎಂದು ತಿರುಗೇಟು ನೀಡಿದರು.

ಅಹಿಂದ ಒಕ್ಕೂಟದ ಚಟುವಟಿಕೆಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸೆಪ್ಟೆಂಬರ್ 6ರಂದು ನಡೆಯಲಿರುವ ಹಿಂದುಳಿದ ವರ್ಗಗಳ ಒಕ್ಕೂಟದ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

2028ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕಾರ್ಯತಂತ್ರದಲ್ಲಿ ಸಿದ್ದರಾಮಯ್ಯ ಪ್ರಮುಖ ಪಾತ್ರ ವಹಿಸಲಿದ್ದಾರೆ. ದಲಿತರು, ಮುಸ್ಲಿಮರು ಮತ್ತು ಕುರುಬ ಸಮುದಾಯಗಳಲ್ಲಿ ಸಿದ್ದರಾಮಯ್ಯ ಅವರಿಗೆ ಉತ್ತಮ ಬೆಂಬಲವಿದೆ ಎಂದು ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page