
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಕಾರ್ಕಳ ಇಲ್ಲಿ 80ನೆಯ ಸ್ವಾತಂತ್ರ್ಯೋತ್ಸವವು ವಿಜೃಂಭಣೆಯಿಂದ ನೆರವೇರಿತು. ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರ ಆಚಾರ್ಯ ಧ್ವಜಾರೋಹಣ ನೆರವೇರಿಸಿದರು.
ಊರಿನ ಪ್ರಮುಖರು, ದಾನಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ದಾನಿಗಳು ನೀಡಿದ ವಿವಿಧ ನಗದು ಪುರಸ್ಕಾರಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿ ಶಾಲಾ ಪೂರ್ವ ವಿದ್ಯಾರ್ಥಿ, ಜರ್ಮನಿ ಉದ್ಯೋಗಿ ಶ್ರೀಧರ್ ಆಚಾರ್ಯ ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರದ ಜೊತೆಗೆ ದೇಶಪ್ರೇಮವನ್ನು ಬೆಳೆಸಿಕೊಂಡು ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಉಪಾಧ್ಯಕ್ಷರಾದ ಕವಿತಾ ಮತ್ತು ಮಹಮ್ಮದ್, ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾದ ಪ್ರೇಮಾ ಹಾಗೂ ಜಗದೀಶ ಆಚಾರ್ಯ,ಹಳೆ ವಿದ್ಯಾರ್ಥಿ ಶೇಖರ್ ಅಂಚನ್, ಕೆ.ಎಂ. ಕೋಟ್ಯಾನ್, ವಸಂತ್ ಎಂ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಕಸ್ತೂರಿ ಎಸ್. ಸ್ವಾಗತಿಸಿದರು. ಶಾರದಾ ಶೇಟ್ ನಿರೂಪಿಸಿದರು. ಅನಿತಾ ಮತಾಯಸ್ ಪ್ರತಿಭಾ ಪುರಸ್ಕೃತರ ಪಟ್ಟಿ ವಾಚಿಸಿದರು. ವೀಣಾ ಎಸ್ ವಂದಿಸಿದರು.













































































































