
ರಾಜ್ಯದಲ್ಲಿ ನೈರುತ್ಯ ಮಾರುತ ಚುರುಕುಗೊಂಡಿದ್ದು ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ,ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗಲಿದೆ.
ಉಡುಪಿ ಸೇರಿದಂತೆ ಕರಾವಳಿಯ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆ ಆಗಲಿದ್ದು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.






















