ತಾಲೂಕು ಮಟ್ಟದ ಖೋ ಖೋ ಪಂದ್ಯಾಟ, ಬಾಲಕಿಯರ ತಂಡ ಪ್ರಥಮ ಸ್ಥಾನ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ,
ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಅಂತೆಯೇ ಬಾಲಕರ ವಿಭಾಗದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಂಡವನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ. ಶೆಣೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಪೂರ್ವ ವಿದ್ಯಾರ್ಥಿಗಳಾದ ಶ್ರೀಮತಿ ವೀಣಾ ಹೆಗ್ಡೆ , ಶ್ರೀಮತಿ ಶ್ವೇತಾ ಸುವರ್ಣ, ನೆಕ್ಲಾಜೆ ಗುತ್ತಿನ ಶ್ರೀಮತಿ ಸುರೇಖಾ ಪ್ರದೀಪ್ ಕೋಟ್ಯಾನ್, ಬಾಲಾಜಿ ಮೊಬೈಲ್ಸ್ ಕಾರ್ಕಳದ ಶ್ರೀ ಪ್ರಶಾಂತ್ ಶೆಣೈ, ಹಿರಿಯ ಸಹ ಶಿಕ್ಷಕರಾದ ಶ್ರೀ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.
ಪ್ರಾಚಾರ್ಯರಾದ ನೇಮರಾಜ ಶೆಟ್ಟಿ ಕೆ ಸ್ವಾಗತಿಸಿದರು. ಪ್ರಭಾತ್ ರಂಜನ್ ವಂದಿಸಿದರು. ಇತಿಹಾಸ ಉಪನ್ಯಾಸಕ ಪ್ರಕಾಶ್ ನಾಯ್ಕ್ ನಿರೂಪಿಸಿದರು.



















































































