
ಇಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಇಂದು ಮತ್ತು ನಾಳೆ ಗಾಳಿಯ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ.
ಕರಾವಳಿಯ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವ ಕಾರಣ ಮೀನುಗಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



















































































