
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗಲಿದೆ.
ಇಂದು ಕರಾವಳಿಯಲ್ಲಿ ಗಾಳಿಯ ಜೊತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ಹಾಸನ ಕೊಡಗು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.



















































































